ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಮೊಬಿಲಿಟಿ ವರದಿಯ ಪ್ರಕಾರ, ಹಣಕಾಸು ವರ್ಷ 2022-2023 ರಲ್ಲಿ ಸುಮಾರು 7.3 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ದೇಶದಲ್ಲಿ ಅತೀ ಹೆಚ್ಚು ಮಾರಾಟವಾಗಿವೆ ಎಂದು ತಿಳಿಸಿದೆ. ಇದರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಲಾಗಿದೆ.
ಮಾರುಕಟ್ಟೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳದೇ ಮೇಲುಗೈ ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಗಳ ದರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯ ಎಲೆಕ್ಟ್ರಿಕ್ ವಾಹನಗಳು ರಸ್ತೆಗಿಳಿಯುತ್ತಿವೆ.
ಪರಿಸರ ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದಲೂ ಈ ವಾಹಗಳಿಗೆ ತುಂಬಾ ಡಿಮ್ಯಾಂಡ್ ಇದೆ.ಭಾರತದ ಮಾರುಕಟ್ಟೆಯಲ್ಲೂ ಇಂಧನ ಆಧಾರಿತ ಬೈಕ್, ಸ್ಕೂಟರ್‌ಗಿಂತ ವಿದ್ಯುತ್ ಚಾಲಿತ ವಾಹನಗಳ ಮಾರುಕಟ್ಟೆ ಹೆಚ್ಚು ಬೆಳವಣಿಗೆ ಆಗುತ್ತಿದೆ. ಹೆಚ್ಚುತ್ತಿರುವ ವಾಹನ ಜಾಗೃತಿ, ಬೆಲೆ ಈ ಎಲ್ಲಾ ಅಂಶಗಳನ್ನು ಆಧರಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳು ಭಾರತದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿವೆ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


