ಮಂಡ್ಯ: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ ಮೋದಿ ಭೇಟಿ ನೀಡಿ ಹವಾ ಎಬ್ಬಿಸಿದ್ದರು. ಈಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡುತ್ತಿದ್ದಾರೆ. ಆ ಮೂಲಕ ಒಕ್ಕಲಿಗ ಮತ ಸೆಳೆಯುವ ಪ್ಲಾನ್ ನಡೆದಿದೆ.
ಹಳೇ ಮೈಸೂರು ಮೇಲೆ ಹೆಚ್ಚು ಫೋಕಸ್ ಮಾಡಿರುವ ಬಿಜೆಪಿ ಈ ಬಾರಿ ಮಂಡ್ಯದಲ್ಲೂ ಎರಡ್ಮೂರು ಕ್ಷೇತ್ರಗಳನ್ನ ಗೆಲ್ಲುವ ಗುರಿ ಹೊಂದಿದೆ. ಅದಕ್ಕಾಗಿಯೇ ರಾಷ್ಟ್ರೀಯ ನಾಯಕರು ಮಂಡ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಮೈಸೂರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್, ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ್ ವೃತ್ತದವರೆಗೆ 1 ಕಿ.ಮೀ. ರೋಡ್ ಶೋ ಮಾಡಲಿದ್ದಾರೆ. ಸಿಲ್ವರ್ ಜುಬಿಲಿ ಪಾರ್ಕ್ ಬಹಿರಂಗ ಸಭೆಯಲ್ಲಿ ಯೋಗಿ ಭಾಷಣ ಮಾಡುವ ಮೂಲಕ ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಸೇರಿದಂತೆ ಜಿಲ್ಲೆಯ ಏಳು ಅಭ್ಯರ್ಥಿಗಳ ಪರವಾಗಿ ಮತ ಬೇಟೆ ಮಾಡಲಿದ್ದಾರೆ.
ಮಂಡ್ಯ ಕಾರ್ಯಕ್ರಮ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಸವನಬಾಗೇವಾಡಿ ಬಿಜೆಪಿ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ ಇಂಡಿ ಬಿಜೆಪಿ ಅಭ್ಯರ್ಥಿ ಕಾಸುಗೌಡಾ ಪಾಟೀಲ ಪರ ಪ್ರಚಾರ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


