ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವ ಅರ್ಜಿಯನ್ನು ಪರಿಗಣಿಸುವಂತೆ ಒತ್ತಾಯಿಸಿ ತುರ್ತು ಪರಿಗಣನೆಗೆ ಇಂದು ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ತೀರ್ಪಿಗೆ ತಡೆ ಕೋರಿ ಸಲ್ಲಿಸಿರುವ ಮನವಿಯನ್ನು ಅಂಗೀಕರಿಸಿದರೆ ಮಾತ್ರ ರಾಹುಲ್ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಲಿದೆ. ಮೇಲ್ಮನವಿಯ ವಿಚಾರಣೆ ವಿಳಂಬವಾಗುವುದರಿಂದ ಶಿಕ್ಷೆಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಶಿಕ್ಷೆಯನ್ನು ಅಮಾನತುಗೊಳಿಸದಿದ್ದರೆ ತುಂಬಲಾರದ ನಷ್ಟ ಉಂಟಾಗಲಿದೆ ಎಂದೂ ರಾಹುಲ್ ಗಾಂಧಿ ಗಮನಸೆಳೆದಿದ್ದಾರೆ.
ಸೂರತ್ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ರಾಹುಲ್ ಗಾಂಧಿ ಪರ ವಕೀಲ ಪಂಕಜ್ ಚಂಪನೇರಿ ಹೇಳಿದ್ದಾರೆ. ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ವಿರುದ್ಧ ರಾಹುಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸೂರತ್ ಸೆಷನ್ಸ್ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನನ್ನು ಅಪರಾಧಿ ಎಂದು ಘೋಷಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕುವಂತೆ ರಾಹುಲ್ ಅರ್ಜಿಯಲ್ಲಿ ಕೋರಲಾಗಿದೆ.
ರಾಹುಲ್ ಅವರ ಎರಡು ವರ್ಷಗಳ ಜೈಲು ಶಿಕ್ಷೆಯ ವಿರುದ್ಧದ ಮುಖ್ಯ ಮೇಲ್ಮನವಿಯಲ್ಲಿ, ಸೆಷನ್ಸ್ ನ್ಯಾಯಾಲಯವು ಮೇ 20 ರಂದು ಮಾತ್ರ ವಿಚಾರಣೆಯನ್ನು ಪ್ರಾರಂಭಿಸುತ್ತದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ರಾಹುಲ್ ಜಾಮೀನು ಮುಂದುವರಿಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಅನರ್ಹಗೊಂಡಿದ್ದ ರಾಹುಲ್, ಸೆಷನ್ಸ್ ಕೋರ್ಟ್ ಆದೇಶದ ನಂತರ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


