ನವ ದೆಹಲಿ: ಹೆಲ್ತ್ ಡ್ರಿಂಕ್ ಬೋರ್ನ್‌ವಿಟಾದಲ್ಲಿ ಸಕ್ಕರೆಯ ಮಟ್ಟ ಅಧಿಕವಾಗಿರುದರಿಂದ ಇದರ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದಿಂದ (NCPCR) ಬೋರ್ನ್‌ವೀಟಾ ತಯಾರಕ ( Bournvita ) ಮೋಂಡೆಲ್ಜ್ ಇಂಡಿಯಾ ಇಂಟರ್‌ನ್ಯಾಶನಲ್‌ಗೆ ನೋಟಿಸ್ ಜಾರಿಮಾಡಿದೆ.
ಇದರ ಬಗ್ಗೆ ಪರಾಮರ್ಶೆ ನಡೆಸಬೇಕು ಹಾಗೂ ದಿಕ್ಕು ತಪ್ಪಿಸುವ ಜಾಹೀರಾತು ಮತ್ತು ಪ್ಯಾಕೇಜಿಂಗ್ ಲೇಬಲ್‌ಗಳನ್ನು ಹಿಂತೆಗೆದುಕೊಳ್ಳುವಂತೆ (misleading advertisements) ಎನ್‌ಸಿಪಿಸಿಆರ್ ಸೂಚನೆ ನೀಡಿದೆ.
ಮಕ್ಕಳ ಹಕ್ಕುಗಳ ಆಯೋಗವು ಕಂಪನಿಗೆ ನೀಡಿರುವ ನೋಟಿಸ್‌ನಲ್ಲಿ, ನಿಮ್ಮ ಉತ್ಪನ್ನದಲ್ಲಿ ಅಧಿಕ ಸಕ್ಕರೆಯ ಪ್ರಮಾಣ ಹೆಚ್ಚು ಇರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದೆ. ಇದು ಮಕ್ಕಳ ಆರೋಗ್ಯ ದ ಮೇಲೆ ತುಂಬಾ ಹಾನಿಯುಂಟಾಗುತ್ತದೆ ಇದರ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದೆ. ಕಂಪನಿಯ ಅಧ್ಯಕ್ಷ ದೀಪಕ್ ಅಯ್ಯರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕುರಿತ ಸಂಸ್ಥೆಯು ಆಹಾರ ವಿಚಾರದಲ್ಲಿ ದಿಕ್ಕು ತಪ್ಪಿಸುವ ಜಾಹೀರಾತು ನೀಡುವ ಕಂಪನಿಗಳ ವಿರುದ್ಧ ಹೆಚ್ಚು ಕ್ರಮ ಕೈಗೊಳ್ಳಬೇಕು ಎಂದು ಎಫ್‌ಎಸ್‌ಎಸ್‌ಎಐಗೆ ಮಕ್ಕಳ ಹಕ್ಕುಗಳ ಆಯೋಗವು ಒತ್ತಾಯಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


