ಕರಾವಳಿ ಜಿಲ್ಲೆಗೆ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಂದು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ ವಿಧಾನ ಸಭಾ ಚುನಾವಣಾ ಕಣ ರಂಗೇರಿದೆ. ಬಿರುಸಿನಿಂದ ಚುನಾವಣಾ ತಯಾರಿಗಳು ತುಂಬಾ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆಗೆ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಮೇ.3ರಂದು ಮುಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಬ ರುತ್ತಿದ್ದಾರೆ. ಬಹುತೇಕ ಜನರು ಅವರ ಆಗಮನಕ್ಕೆ ಕಾಯುತ್ತಿದ್ದಾರೆ ಮತ್ತು ಮೇ.6ರಂದು ದ.ಕ ಜಿಲ್ಲೆಗೆ ಯೋಗಿ ಆದಿತ್ಯನಾಥ್ ಬರುತ್ತಾರೆ ಆದರೆ ಯೋಗಿಯವರ ಕಾರ್ಯಕ್ರಮದ ಜಾಗ ನಿಗದಿಯಾಗಿಲ್ಲ. ಉಡುಪಿ ಮತ್ತು ದ.ಕ ಜಿಲ್ಲೆ ಯನ್ನು ಕೇಂದ್ರೀಕರಿಸಿ ಸಮಾವೇಶಗಳು ನಡೆಯಲಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


