ದ್ವೇಷದ ಭಾಷಣ ಮಾಡುವವರ ವಿರುದ್ಧ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಕಠಿಣಗೊಳಿಸಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ದ್ವೇಷ ಭಾಷಣದ ಪ್ರಕರಣಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಪೊಲೀಸರಿಗೆ ನಿರ್ದೇಶನ ನೀಡಿದ ಅಕ್ಟೋಬರ್ 2022 ರ ಆದೇಶವು ಪ್ರಸ್ತುತ ಎಲ್ಲಾ ರಾಜ್ಯಗಳಿಗೆ ಅನ್ವಯಿಸುತ್ತದೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ದ್ವೇಷದ ಮಾತುಗಳು ಸಂವಿಧಾನದ ಸಾರ ಮತ್ತು ಚೌಕಟ್ಟಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಪೀಠವು ಗಮನಿಸಿದೆ. ಇನ್ನಾದರೂ ಪೊಲೀಸರು ಎರಡು ಗುಂಪುಗಳ ನಡುವೆ ದ್ವೇಷ ಹರಡುವ, ದೇಶದ ಏಕತೆ ಒಡೆಯುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಪ್ರಕರಣಗಳಲ್ಲಿ ದೂರುಗಳಿಗೆ ಕಾಯದೆ ಪ್ರಕರಣ ದಾಖಲಿಸಬೇಕು.
ಕೇವಲ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ವಿಚಾರಣೆ ನಡೆಸುವ ಪದ್ಧತಿ ಇರಬಾರದು ಎಂದು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಇಂತಹ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


