ಮಾನಸಿಕವಾಗಿ ಕುಗ್ಗಿರುವವರಲ್ಲಿ ವ್ಯಾಯಾಮ ಅಥವಾ ಇನ್ನಿತರ ದೈಹಿಕ ಚಟುವಟಿಕೆಗಳಿಂದ ಹೆಚ್ಚಿನ ಪ್ರಯೋಜನ ನೀಡುತ್ತದೆ ಎಂದು ಅಧ್ಯಯನ ತಿಳಿಸಿದೆ.
ಈ ಸಂಬಂಧ ದಕ್ಷಿಣ ಆಸ್ಟ್ರೇಲಿಯಾ ವಿಶ್ವವಿದ್ಯಾಲಯ ಸಂಶೋಧಕರ ತಂಡ ಸಂಶೋಧನೆ ನಡೆಸಿದೆ. ಇದರ ಅನುಸಾರ ಔಷಧಗಳಿಗಿಂತ ವ್ಯಾಯಾಮಗಳು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಈ ಕುರಿತು ಬ್ರಿಟಿಷ್ ಜರ್ನಲ್ ಆಫ್ ಸ್ಪೋರ್ಟ್ ಮೆಡಿಸಿನ್ನಲ್ಲೂ ಪ್ರಕಟವಾಗಿದೆ.
ಈ ಸಂಬಂಧ ವು 97 ಅಧ್ಯಯನ, 1039 ಪ್ರಯೋಗ ನಡೆಸಿದ್ದು, 1, 28, 119 ಭಾಗಿದಾರರ ಮೇಲೆ ಅಧ್ಯಯನ ಮಾಡಲಾಗಿದೆ. ಈ ವೇಳೆ, ವ್ಯಾಯಾಮದಂತಹ ದೈಹಿಕ ಚಟುವಟಿಕೆಯಲ್ಲಿ ಹೆಚ್ಚು ತೊಡಗಿದವರಲ್ಲಿ ದುಃಖ, ಆತಂಕ ಮತ್ತು ಖಿನ್ನತೆಗಳು ಯಾವ ರೀತಿ ಪರಿಣಾಮ ಬೀರುತ್ತದೆ ಎಂದು 12 ವಾರಗಳ ಕಾಲ ಅಧ್ಯಯನ ನಡೆಸಲಾಗಿದೆ. ಇವರ ಮಾನಸಿಕ ಆರೋಗ್ಯ ಸುಧಾರಣೆ ಮಾಡುವಲ್ಲಿ ದೈಹಿಕ ಚಟುವಟಿಕೆಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ ತಿಳಿದು ಬಂದಿದೆ.
ಅದರಲ್ಲೂ ಗರ್ಭಿಣಿ ಮತ್ತು ಹೆರಿಗೆ ಬಳಿಕ ಮಹಿಳೆಯರಲ್ಲಿ ಕಾಡುವ ಮಾನಸಿಕ ಸಮಸ್ಯೆ, ಇನ್ನಿತರ ರೋಗಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗಿರುವವರಲ್ಲಿ ವ್ಯಾಯಾಮ ಹೆಚ್ಚಿನ ಪ್ರಯೋಜನ ನೀಡುತ್ತದೆ ಎಂದು ಹೇಳಲಾಗಿದೆ.
ವಿಶ್ವ ಸಂಸ್ಥೆಯ ಪ್ರಕಾರ, ಜಗತ್ತಿನಲ್ಲಿ 970 ಮಿಲಿಯನ್ ಮಂದಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಆದರೆ 2030ರ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಈ ಕುರಿತು ಮಾತನಾಡಿರುವ ಸಂಶೋಧಕ ಲೆಖಕ ಡಾ ಬೆನ್ ಸಿಂಗ್, ಮಾನಸಿಕೆ ಆರೋಗ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಕಡಿಮೆ ಮಾಡಲು ದೈಹಿಕ ಚಟುವಟಿಕೆಗೆ ಹೆಚ್ಚು ಒತ್ತು ನೀಡಬೇಕಿದೆ ಎಂದಿದ್ದಾರೆ. ಮಾನಸಿಕ ಆರೋಗ್ಯದ ಸುಧಾರಣೆಗೆ ದೈಹಿಕ ಚಟುವಟಿಕೆಗಳು ಸಹಾಯ ಮಾಡುತ್ತದೆ ಎಂಬುದನ್ನು ಅಧ್ಯಯನ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA