ಬೆಂಗಳೂರು: ನೂರನೇ ಸಂಚಿಕೆಯ ಮನ್ ಕೀ ಬಾತ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆದರೆ, ಸದ್ಯ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುದರಿಂದ ಮೋದಿ ಭಾನುವಾರವೂ ರಾಜ್ಯದಲ್ಲೇ ಇರಲಿದ್ದಾರೆ. ಅವರು ಮನ್ ಕೀ ಬಾತ್ನ ನೂರನೇ ಸಂಚಿಕೆ ಕಾರ್ಯಕ್ರಮ ವೀಕ್ಷಣೆ ಮಾಡಲು ರಾಜ್ಯದಲ್ಲೇ ಇರುತ್ತಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ 100 ನೇ ಸಂಚಿಕೆಯ ಪ್ರಸಾರಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈಗಾಗಲೇ ವಿಶೇಷ ಸಿದ್ಧತೆಗಳನ್ನು ನಡೆಸಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಬುಧವಾರ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ 105 ಜನರನ್ನು ವಿಶೇಷವಾಗಿ ಆಹ್ವಾನಿಸಲಾಗಿದ್ದು, ಅವರ ಸೃಜನಶೀಲ ಮತ್ತು ಸಾಮಾಜಿಕ ಕಾರ್ಯಗಳನ್ನು ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ನಲ್ಲಿ ಪ್ರಸ್ತಾಪಿಸಿದ್ದಾರೆ.
ರಾಜ್ಯ ಪ್ರವಾಸದಲ್ಲಿರುವ ಮೋದಿ ಇಂದು (ಶನಿವಾರ) ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಅವರು ಯಾವುದೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಿಲ್ಲ. ಬದಲಿಗೆ ರಾಜಭವನದಲ್ಲೇ ಇದ್ದುಕೊಂಡು ಮನ್ ಕೀ ಬಾತ್ನ ನೂರನೇ ಸಂಚಿಕೆ ಪ್ರಸಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಯಕ್ರಮ ಮುಗಿದ ನಂತರ ಕೋಲಾರ, ಮೈಸೂರು, ಚನ್ನಪಟ್ಟಣಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


