ಬೆಳಗಾವಿ ಉತ್ತರ ಮತಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಜು ಟೋಪಣ್ಣನವರು ಇಂದು ಬೆಳಗಾವಿ ಉತ್ತರ ಮತಕ್ಷೇತ್ರ ದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದರು ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ನಿರಾಣಿ ಕಿತ್ತೂರು ಚೆನ್ನಮ್ಮ ಗೌರವ ವಂದನೆ ಸಲ್ಲಿಸಿ ಪ್ರಚಾರ ಪ್ರಾರಂಭಿಸಿದರು.
ನಗರದ ಕಾಕತಿ ವೇಸ್ ನಾರೇಕರ್ ಗಲ್ಲಿ ಮಾರ್ಗವಾಗಿ ಸಾಗಿ ಮತದಾರರಿಗೆ ಮನವಿ ಮಾಡಿಕೊಂಡರು ಆಮ್ ಆದ್ಮಿ ಪಕ್ಷ ಮತ ನೀಡಬೇಕು ಆಮ್ ಆದ್ಮಿ ಪಕ್ಷ ದಿಲ್ಲಿ ಹಾಗೂ ಪಂಜಾಬ್ ನಲ್ಲಿ ಕೈಗೊಂಡಿರುವ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಕೂಡ ಹಮ್ಮಿಕೊಳ್ಳಲು ಮತದಾರರು ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡರು.
ಬೆಳಗಾವಿಯಲ್ಲಿ ನಡೆದಿರುವಂತ ಭ್ರಷ್ಟಾಚಾರ ಕುರಿತು ಪ್ರಸ್ತಾಪಿಸಿ ಈ ವಿಷಯದ ಕುರಿತಾಗಿ ನಾವು ಏನು ಹೆಚ್ಚಿಗೆ ಮಾತನಾಡುವುದಿಲ್ಲ ಬೆಲೆ ಏರಿಕೆ ಇಂದ ಜನರು ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಬೇಸತ್ತು ಹೋಗಿದ್ದಾರೆ ಹಾಗಾಗಿ ಜನ ಬದಲಾವಣೆ ಬಯಸುತ್ತಾ ಇದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


