ಪಂಜಾಬ್‌ನ ಲುಧಿಯಾನದ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಬಗ್ಗೆಯೂ ವರದಿಯಾಗಿದೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಲುಧಿಯಾನದ ಶೇರ್ಪುರ್ ಚೌಕ್ ನಲ್ಲಿ ಈ ಘಟನೆ ನಡೆದಿದೆ.
ಗೋಯಲ್ ಮಿಲ್ಕ್ ಪ್ಲಾಂಟ್‌ನ ಚಿಲ್ಲರ್‌ನಿಂದ ಅನಿಲ ಸೋರಿಕೆ ಸಂಭವಿಸಿದೆ. ಇದರಿಂದಾಗಿ ಆ ಪ್ರದೇಶದಲ್ಲಿದ್ದ ಜನರನ್ನು ಮನೆಗಳಿಂದ ಸ್ಥಳಾಂತರಿಸಲಾಗಿದೆ. ಈ ಪ್ರದೇಶವನ್ನು ಪ್ರವೇಶಿಸುವುದು ಅಪಾಯಕಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಿಲ ಸೋರಿಕೆಯಿಂದಾಗಿ ಕಾರ್ಖಾನೆಯ 300 ಮೀಟರ್ ವ್ಯಾಪ್ತಿಯ ಜನರು ಉಸಿರಾಟದ ತೊಂದರೆ ಅನುಭವಿಸಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA