ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಆಗಮಿಸಿದ ಸಮಾವೇಶದ ವೇಳೆ ಜನರು ತಂಪು ಪಾನೀಯ ವಾಹನದ ಮೇಲೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್ ಕುಡಿದಿದ್ದರು. ಇದರಿಂದ ಸಮೀರ್ ಹಸನ್ ಸಾಬ್‌ಗೆ 35,000 ರೂ. ನಷ್ಟವಾಗಿ ಕಣ್ಣೀರಿಟ್ಟಿದ್ದರು.
ಈ ಸುದ್ದಿ ತಿಳಿದು ಸಂಸದ ಪ್ರತಾಪ್ ಸಿಂಹ, ನಷ್ಟ ಅನುಭವಿಸಿದ್ದ ವ್ಯಾಪಾರಿ ಸಮೀರ್‌ಗೆ ಫೋನ್ ಪೇ ಮೂಲಕ 35,000 ಹಣ ಸಂದಾಯವಾಗಿದೆ. ಹಣ ಸಂದಾಯ ಮಾಡಿರುವ ಬಗ್ಗೆ ಟ್ವೀಟ್ ನಲ್ಲಿ ಸ್ಪಷ್ಟನೆ ನೀಡಿದ್ದು, ಕ್ಷಮಿಸಿ ಸಹೋದರ ಎಂದು ಟ್ವೀಟ್ ಮಾಡಿದ್ದಾರೆ.
ಇದರೊಂದಿಗೆ ಬಡ ವ್ಯಾಪಾರಿಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಬದಿದ್ದ ಜನರಿಗೆ ಕಾರ್ಯಕ್ರಮದ ಆಯೋಜಕರು ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಬಿಸಿಲಿನ ಬೇಗೆಗೆ ಜನ ಬೇಸತ್ತು ಹೋಗಿದ್ದರು. ಜನರಿಗೆ ತುಂಬ ಬಾಯಾರಿಕೆ ಆಗಿದ್ದುಮ ನೀರಿಗಾಗಿ ಪರದಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಸಮೀರ್ ಹಸನ್ ಸಾವ್ ಎನ್ನುವಾತ ಕೂಲ್ ಡ್ರಿಂಕ್ಸ್ ಇರುವ ವಾಹನ ಸಮಾವೇಶದ ಬಳಿ ವ್ಯಾಪಾರಕ್ಕೆ ಬಂದಿದ್ದ.
ಬಿಜೆಪಿಯವರೇ ಕೂಲ್ ಡ್ರಿಂಕ್ಸ್ ತರಿಸಿದ್ದಾರೆ ಎಂದು ಜನ ಸಮೀರ್ ವಾಹನಕ್ಕೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್, ಜ್ಯೂಸ್, ನೀರಿನ ಬಾಟಲ್ ತಗೆದುಕೊಂಡು ಹೋಗಿದ್ದರು. ಇದರಿಂದ ಸುಮಾರ್ 35 ಸಾವಿರ ರೂಪಾಯಿ ನಷ್ಟವಾಯ್ತು ಎಂದು ಸಮೀರ್ ಕಣ್ಣೀರಿಟ್ಟಿದ್ದ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


