ದೆಹಲಿ ;ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಖಾಲಿ ಮನೆಗೆ ಕರೆದೊಯ್ದು ನಂತರ ಚಿತ್ರಹಿಂಸೆ ನೀಡಿದ್ದಾನೆ.. ಘಟನೆಯಲ್ಲಿ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶನಿವಾರ ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಉದ್ಯಾನವನದ ಬಳಿಯಿರುವ ನಿರ್ಜನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಮನೆಗೆ ಮರಳಿದ ಬಾಲಕಿ ನಡೆದ ಘಟನೆಯನ್ನು ಪೋಷಕರಿಗೆ ಹೇಳಿದ್ದಾಳೆ. ಬಳಿಕ ಸುಸ್ತಾಗಿದ್ದ ಮಗುವನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಬಾಲಕಿಯು ಕಿರುಕುಳಕ್ಕೆ ಒಳಗಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


