ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಭಾನುವಾರ ಸಿಡಿಲು ಬಡಿದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಇಂಡಸ್‌ನಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನಡೆಸಿದ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
40 ವರ್ಷದ ಸಾಬರ್ ಮಲ್ಲಿಕ್ ಮೃತರು. ರ‍್ಯಾಲಿ ಸಾಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿತು. ಇದರೊಂದಿಗೆ ಕೆಲವು ತೃಣಮೂಲ ಕಾರ್ಯಕರ್ತರು ಸಮೀಪದ ಮರದ ಕೆಳಗೆ ಆಶ್ರಯ ಪಡೆದರು. ಅಷ್ಟರಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಲಿಲ್ಲ.
ಗಾಯಗೊಂಡ 25 ಮಂದಿಯಲ್ಲಿ ಏಳು ಮಂದಿಯನ್ನು ಬುರ್ದ್ವಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಪಕ್ಷ ಸಂತಾಪ ವ್ಯಕ್ತಪಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy