ವಿಜಯಪುರ: ಹಾಳು ಬಾವಿಯಲ್ಲಿ ವೃದ್ಧೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಶೇಖವ್ವ ತಾಯಿ ನರಳು ಮೃತ ದುರ್ದೈವಿ. ದೇವರಹಿಪ್ಪರಗಿ ಪಟ್ಟಣದ ಉಪ್ಪಳೇ ಅವರ ಹಾಳು ಬಾವಿಯಲ್ಲಿ ಶವ ಪತ್ತೆಯಾಗಿದೆ. ಬೆಳಗ್ಗೆ ಗ್ರಾಮಸ್ಥರು ಬಾವಿ ಸಮೀಪ ಹೋದಾಗ ವಿಷಯ ತಿಳಿದಿದೆ. ಇವರ ಸಾವಿಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ.
ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


