nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ಮತ ಯಾಚನೆ
    ಕೊರಟಗೆರೆ May 1, 2023

    ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ಮತ ಯಾಚನೆ

    By adminMay 1, 2023No Comments2 Mins Read
    anill

    ಕೊರಟಗೆರೆ :ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ರೋಡ್ ಶೋ ನಡೆಸಿದರು. ಬೃಹತ್ ಮೆರವಣಿಗೆಗೆ ಆಗಮಿಸಿದ ಅಸ್ಸಾಂ ಸಿಎಂ ರವರನ್ನು ವಿವಿಧ ಕಲಾ ತಂಡಗಳೊಂದಿಗೆ ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬರ ಮಾಡಿಕೊಂಡರು.

    ಕೊರಟಗೆರೆ ಪಟ್ಟಣದ ಕೆ ಎಸ್ ಆರ್ ಟಿ ಸಿ ವೃತದಿಂದ ಎಸ್ ಎಸ್ ಆರ್ ವೃತ್ತದವರೆಗೂ ಬೃಹತ್ ಮೆರವಣಿಗೆ ನಡೆಸಲಾಯಿತು. ಭಾರೀ ಭದ್ರತೆಯೊಂದಿಗೆ ನಡೆದ ರೋಡ್ ಶೋ ಯಶಸ್ವಿಯಾಯಿತು.


    Provided by
    Provided by

    ಇದೇ ವೇಳೆ ಮಾತನಾಡಿದ ಅನಿಲ್ ಕುಮಾರ್, ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಮುಕ್ತ ಕೊರಟಗೆರೆ ಕ್ಷೇತ್ರವನ್ನಾಗಿ ಮಾಡಬೇಕು. ಡಾ.ಜಿ.ಪರಮೇಶ್ವರ್ 2,600 ಕೋಟಿಯಲ್ಲಿ ಕೊರಟಗೆರೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಅನುದಾನವನ್ನು ತಂದಿದ್ದೇವೆ ಎಂದು ಹೇಳುತ್ತಾರೆ, 2,600 ಕೋಟಿ ಹಣದಲ್ಲಿ ಕೊರಟಗೆರೆ ಕ್ಷೇತ್ರವನ್ನು ರಾಜಧಾನಿಯಂತೆ ಅಭಿವೃದ್ಧಿ ಗೊಳಿಸಬಹುದಿತ್ತು ಎಂದು ಲೇವಡಿ ಮಾಡಿದರು.

    ಕ್ಷೇತ್ರದ 330 ಹಳ್ಳಿಗಳಲ್ಲಿ ಶೇಕಡ 80 ರಷ್ಟು ಹಳ್ಳಿಗಳಿಗೆ ನಾನು ಭೇಟಿ ನೀಡಿದ್ದೇನೆ. ಸರಿಯಾದ ರಸ್ತೆಗಳಿಲ್ಲದೆ, ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆಗಳಿಲ್ಲ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ ಎಂದು ಅವರು ಹೇಳಿದರು.

    ಸಾರ್ವಜನಿಕರನ್ನುದ್ದೇಶಿಸಿ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ಮಾತನಾಡುವ ಮೊದಲು ಕನ್ನಡದಲ್ಲಿ ಮಾತನಾಡಿದ್ದು ವಿಶೇಷವಾಗಿತ್ತು. ಕರ್ನಾಟಕ ಮತ್ತು ಅಸ್ಸಾಂ ಸೇರಿದಂತೆ ಎಲ್ಲಾ ಭಾಗಗಳಲ್ಲೂ ಬಿಜೆಪಿ ಸರ್ಕಾರವಿದೆ ಇಡೀ ವಿಶ್ವದಲ್ಲಿಯೇ ನರೇಂದ್ರ ಮೋದಿ ಅವರ ಅಲೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

    ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ನೀಡಿದಂತಹ ಮೀಸಲಾತಿ ಶೇಕಡ 4ನ್ನು ನಮ್ಮ ಸರ್ಕಾರವು ವಾಪಸ್ ಪಡೆದು ಒಕ್ಕಲಿಗ ಮತ್ತು ಲಿಂಗಾಯತ ಸಮಾಜಗಳಿಗೆ ನೀಡಲಾಗಿದೆ ನಮ್ಮ ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ ನಿಂತಿದೆ ಎಂದರು.

    ಕಾಂಗ್ರೆಸ್ ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಗೆ ನೀಡಿರುವ ಮೀಸಲಾತಿಯನ್ನು ಕಿತ್ತು ಮತ್ತೆ ಮುಸ್ಲಿಂ ಸಮುದಾಯಕ್ಕೆ ನೀಡಲಾಗುವುದು ಎಂದು ಪ್ರಚಾರ ಬಿಂಬಿಸುತ್ತಿದೆ ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದಿಲ್ಲ ಎಂದರು.

    ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಸರ್ಕಾರವು ಜನಪರವಾದಂತಹ ಕೆಲಸಗಳನ್ನು ಮಾಡಿದೆ. ಎಸ್ ಸಿ ಮತ್ತು ಎಸ್ ಟಿ ಸಮುದಾಯಗಳ ಪರವಾಗಿ ಕೆಲಸ ಮಾಡಿದೆ ಎಂದು ಅವರು ಹೇಳಿದರು.

    ಕೊರಟಗೆರೆ ಕ್ಷೇತ್ರದಿಂದ ಪರಮೇಶ್ವರರನ್ನು ಓಡಿಸಬೇಕು ಎಂದ ಅವರು, ರಾಹುಲ್ ಗಾಂಧಿಯ ಗಡ್ಡಕ್ಕೂ ಬೆಲೆ ಇಲ್ಲ ಅವರ ಎಂ ಪಿ ಸ್ಥಾನಕ್ಕೂ ಬೆಲೆ ಇಲ್ಲ ಎಂದು ಲೇವಡಿ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ತುಮಕೂರು: ವಿಕಲಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.05ರಷ್ಟು ರಾಜಕೀಯ ಮೀಸಲಾತಿ ನೀಡಬೇಕು, ಬಜೆಟ್‌ ನಲ್ಲಿ ಹೆಚ್ಚುವರಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ…

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ

    February 21, 2026

    ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.