ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ನಿಮ್ಮ ಜೇಬಿನಿಂದ ಹಣವನ್ನು ಕಿತ್ತುಕೊಂಡಿದೆ. ಈಗ ಎಲ್ಲಾ ಕೆಲಸಗಳಿಗೆ 40 ಪರ್ಸೆಂಟ್ ಕಮಿಷನ್ ಕೊಡುವ ಪರಿಸ್ಥಿತಿ ಬಂದಿದೆ ಎಂದು ರಾಹುಲ್ ಗಾಂಧಿ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪಟ್ಟಣದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀವು ಬಿಜೆಪಿಗೆ ಮತ ನೀಡಿಲ್ಲ, ಅವರನ್ನು ಆಯ್ಕೆ ಮಾಡಿಲ್ಲ. ಆದರೆ, ಬಿಜೆಪಿಯವರು, ಶಾಸಕರನ್ನು ಖರೀದಿ ಮಾಡಿ ಲೋಕತಂತ್ರವನ್ನು ಹಾಳು ಮಾಡಿದ್ದಾರೆ ಎಂದು ಹೇಳಿದರು.
ಸರ್ಕಾರದ ಕೆಲಸ ಜನರಿಗೆ ಉದ್ಯೋಗ, ಶಿಕ್ಷಣ, ಆರೋಗ್ಯಕ್ಕೆ ಹಣ ನೀಡಬೇಕು. ಆದರೆ ಈ ಸರ್ಕಾರ ನಿಮ್ಮ ಜೇಬಿಗೆ ಕತ್ತರಿ ಹಾಕುತ್ತಿದೆ. ಎಲ್ಲಾ ಕೆಲಸದ ಮೇಲೆ 40 ಪರ್ಸೆಂಟ್ ಲಂಚ ತೆಗೆದುಕೊಂಡಿದ್ದಾರೆ. ನನ್ನ ಹತ್ತಿರ 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡಿದ್ದಾರೆ ಅಂತ ದಿಂಗಾಲೇಶ್ವರ ಸ್ವಾಮೀಜಿ ಕೂಡ ಹೇಳಿದ್ದಾರೆ. ಬಿಜೆಪಿ ಶಾಸಕರೊಬ್ಬರು , ಈಗಿನವರು 2 ಸಾವಿರ ಕೋಟಿ ಕೊಟ್ಟು ಸಿಎಂ ಆಗಿದ್ದಾರೆ ಅಂತ ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ಅವರು ಹೇಳಿದರು.
ನಾವು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿಯನ್ನು ನೀಡುತ್ತೇವೆ, ಹಾಗೆಯೇ ಮುಂದುವರೆದು ಸಖಿ ಎನ್ನುವಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತವಾಗಿ ಬಸ್ ನಲ್ಲಿ ಸಂಚರಿಸುವ ವ್ಯವಸ್ಥೆಯನ್ನು ಮಾಡುವುದು ನಮ್ಮ ಧ್ಯೇಯವಾಗಿದೆ ಎಂದು ಅವರು ಹೇಳಿದರು.
ವರದಿ: ಸುರೇಶ್ ಬಾಬು ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


