ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಮಾಡಲಿದ್ದಾರೆ. ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮೈದಾನದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹನೂರು ಬಿಜೆಪಿ ಅಭ್ಯರ್ಥಿ ಪ್ರೀತನ್ ನಾಗಪ್ಪ ಪರ ಮತಯಾಚನೆ ಮಾಡಲಿದ್ದಾರೆ.
ಬಳಿಕ ಕೊಳ್ಳೇಗಾಲ ಕ್ಷೇತ್ರದ ಸಂತೇಮರಹಳ್ಳಿಯಲ್ಲಿ ಕೊಳ್ಳೇಗಾಲ ಅಭ್ಯರ್ಥಿ ಎನ್.ಮಹೇಶ್ ಪರ ಮತಯಾಚಿಸಲಿದ್ದಾರೆ. ಹಾಗೂ ಸಿದ್ದರಾಮಯ್ಯ ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ಹೆಣೆದಿದ್ದು ಬೆಳಗ್ಗೆ 11 ಗಂಟೆಗೆ ವರುಣ ಕ್ಷೇತ್ರದ ಹೊಸಕೋಟೆ ಬಳಿ ಸಮಾವೇಶ ನಡೆಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದು ಆಡುಗೋಡಿ ಸಿಗ್ನಲ್‌ನಿಂದ ಆರಂಭವಾಗಿ ಹೊಸೂರು ರಸ್ತೆಯ ಟೋಟಲ್ ಮಾಲ್‌ವರೆಗೂ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ನಡೆಯುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಸುಗಮ ಸಂಚಾರಕ್ಕೆ ವಾಹನಗಳ ಮಾರ್ಗ ಬದಲಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


