ಬೆಂಗಳೂರು: ಡಿಕೆ ಶಿವಕುಮಾರ್ ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಆದ್ರೆ ಹೆಲಿಕಾಪ್ಟರ್ ಕೊಂಚ ದೂರ ಸಾಗಿ ತುರ್ತು ಭೂಸ್ಪರ್ಶವಾಗಿದೆ. ಏಕೆಂದರೆ ಹಾರಾಟ ವೇಳೆ ಹೆಲಿಕಾಪ್ಟರ್ ಮುಂಭಾಗದ ವಿಂಡೋ ಗಾಜು ಪುಡಿಪುಡಿಯಾಗಿದೆ.
ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ರಣಹದ್ದು ಬಡಿಯುತ್ತಿದ್ದಂತೆ ಡಿಕೆ ಶಿವಕುಮಾರ್ ಕೆಲ ಸಮಯ ಗಾಬರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಹೆಲಿಕಾಪ್ಟರ್ ಸಿಬ್ಬಂದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಟಿವಿ9 ಪ್ರತಿನಿಧಿ, ಕ್ಯಾಮರಾಮೆನ್ ಎಲ್ಲರೂ ಕೂಡ ಸುರಕ್ಷಿತರಾಗಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ಗೆ ಹಿಂದಿರುಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


