ತಮಿಳು ಹಾಸ್ಯ ನಟ ಮನೋಬಾಲಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಇಂದು ಕೊನೆಯುಸಿರೆಳೆದಿದ್ದಾರೆ .ಹಾಸ್ಯಕ್ಕೆ ಹೆಸರಾದ ನಿರ್ದೇಶಕ, ನಿರ್ಮಾಪಕ ಮತ್ತು ನಟ ಮನೋಬಾಲಾ ಅವರಿಗೆ 69 ವರ್ಷ ವಯಸ್ಸಾಗಿತ್ತು. ಇವರು ಹೃದಯ ಸಂಬಂಧಿ ಕಾಯಿಲೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮನೋಬಾಲ ಅವರ ಲಿವರ್ ಗೆ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ನಂತರ ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿ ತಿಳಿದ ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಇವರಿಗೆ ಸಂತಾಪ ಸೂಚಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


