nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಗೆ ಮತ ನೀಡಿ ರಾಜ್ಯದಲ್ಲಿ ಜನಪರ ಸರಕಾರ ಅಧಿಕಾರಕ್ಕೆ ತನ್ನಿ – ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ May 4, 2023

    ಕಾಂಗ್ರೆಸ್ ಗೆ ಮತ ನೀಡಿ ರಾಜ್ಯದಲ್ಲಿ ಜನಪರ ಸರಕಾರ ಅಧಿಕಾರಕ್ಕೆ ತನ್ನಿ – ಲಕ್ಷ್ಮೀ ಹೆಬ್ಬಾಳಕರ್

    By adminMay 4, 2023No Comments2 Mins Read
    lakshmi hebbalkar

    Provided by
    Provided by

    ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಠಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಬೆಳಗಾವಿಯ ಮಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬುಧವಾರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಜನರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಮುಕ್ತಿ ನೀಡಲಿವೆ. ಜೊತೆಗೆ ಪ್ರಣಾಳಿಕೆಯಲ್ಲಿ ಸಹ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಲಾಗಿದೆ.

    ರೈತರಿಗಾಗಿ, ಯುವಕರಿಗಾಗಿ, ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ಹೆಬ್ಬಾಳಕರ್ ತಿಳಿಸಿದರು.

    ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ನೀಡಲಾಗುತ್ತದೆ.


    Provided by
    Provided by

    ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು. ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಗಳನ್ನು 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ರೈತರ ಹಿತ ಕಾಯಲು ಸಹ ಕಾಂಗ್ರೆಸ್ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ ಎಂದು ಅವರು ವಿವರಿಸಿದರು.

    ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗಲೆಲ್ಲ ಬಡವರಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆದರೆ ಬಿಜೆಪಿ ಸರಕಾರ ಬಂದ ಮೇಲೆ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡಿಲ್ಲ. ಉದ್ಯೋಗ ನೀಡುವ ಯೋಜನೆ ಇಲ್ಲ, ಮನೆ ನಿರ್ಮಾಣವಾಗಿಲ್ಲ, ಕೇವಲ ಭಾವನಾತ್ಮಕವಾಗಿ ಪ್ರಚೋದನೆ ನೀಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ.
    ಹಾಗಾಗಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನಿಮ್ಮದೇ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಹೆಬ್ಬಾಳಕರ್ ವಿನಂತಿಸಿದರು.

    ಬ್ಯಾಲೆಟ್ ಯುನಿಟ್ ನಲ್ಲಿ 4ನೇ ನಂಬರ್ ನಲ್ಲಿರುವ ನನ್ನ ಹೆಸರು ಫೋಟೋ ಮುಂದೆ ಇರುವ ಬಟನ್ ಒತ್ತುವ ಮೂಲಕ ಹಸ್ತದ ಚಿಹ್ನೆಗೆ ಮತ ನೀಡಿ. ಮಂದಿನ 5 ವರ್ಷಗಳಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ಹಲವಾರು ಕನಸಿನ ಯೋಜನೆಗಳನ್ನು ಜಾರಿಗೊಳಿಸುತ್ತೇನೆ. ನಿಮ್ಮ ನಿರೀಕ್ಷೆಗಳನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

    ಅಪಾರ ಜನ ಬೆಂಬಲ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೂರ್ವ ಭಾಗದಂತೆ ಪಶ್ಚಿಮ ಭಾಗದಲ್ಲೂ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿ ಊರಲ್ಲಿ ಸಾಗರೋಪಾದಿಯಲ್ಲಿ ಜನರು ರೋಡ್ ಶೋ ಗಳಲ್ಲಿ, ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.