ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ನಂದಿಗ್ರಾಮ ಶಾಸಕರ ವಾಹನವು, ರಸ್ತೆ ಬದಿಯಲ್ಲಿದ್ದ ಶೇಖ್ ಇಸ್ರಾಫಿಲ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಂಡೀಪುರದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ.
ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ವಿರೋಧ ಪಕ್ಷದ ನಾಯಕ ಮೊಯಿನಾದಲ್ಲಿ ಪಕ್ಷದ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದರು. ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನವು ಚಂಡಿಪುರದ ರಸ್ತೆಯಲ್ಲಿದ್ದ ಶೇಖ್ ಇಸ್ರಫೀಲ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ನಿಲ್ಲಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಚಾಲಕ ಪಾನಮತ್ತನಾಗಿದ್ದಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ನಂತರ ಸ್ಥಳೀಯರು ಸುವೇಂದು ಅಧಿಕಾರಿಗೆ ಶಿಕ್ಷೆಗೆ ಒತ್ತಾಯಿಸಿ ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿದರು. ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ. ಮೃತದೇಹವನ್ನು ತಮ್ಲುಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಶ್ನೆಯಲ್ಲಿರುವ ವಾಹನವು ನಂದಿಗ್ರಾಮ್ ಶಾಸಕರ ಬೆಂಗಾವಲು ಪಡೆಯ ಭಾಗವೇ ಎಂಬುದನ್ನು, ಪೊಲೀಸರು ಇನ್ನೂ ಖಚಿತಪಡಿಸಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಈ ಬಗ್ಗೆ ಸುವೇಂದು ಅಧಿಕಾರಿಯಾಗಲಿ ಅಥವಾ ಕೇಸರಿ ಪಕ್ಷದ ಯಾವುದೇ ನಾಯಕರಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


