ನವದೆಹಲಿ: ಇವಿಎಂಗಳ ಖರೀದಿಯಲ್ಲಿ ಭಾರತ ಚುನಾವಣಾ ಆಯೋಗ ಅಕ್ರಮ ನಡೆಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣಾ ವೆಚ್ಚ ಹೆಚ್ಚಾದರೆ ಅದು ಪ್ರಜಾಪ್ರಭುತ್ವಕ್ಕೆ ತೆರಬೇಕಾದ ಬೆಲೆಯಾಗಿದೆ. ಅದ್ದರಿಂದ ಇವಿಎಂ ಖರೀದಿಯಲ್ಲಿ ಹೇಗೆ ಹಣ ಖರ್ಚು ಮಾಡಿದ್ದೀರಿ ಎಂದು ಕೇಳಲು ಸಾದ್ಯವಿಲ್ಲ. ಅಲ್ಲದೆ ಇವಿಎಂಗಳನ್ನು ಖರೀದಿಸುವ ವಿಷಯವು ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್‍ಗೆ ತೆರಳುವ ಆರ್ಟಿಕಲ್ 32 ರ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
ಈ ವೇಳೆ ಅರ್ಜಿದಾರರ ಪರ ವಕೀಲ, ಭಾರತ ಚುನಾವಣಾ ಆಯೋಗ ಇವಿಎಂಗಳನ್ನು ಖರೀದಿಸಿದೆ ಎಂದು ತೋರಿಸಿದೆ. ಆದರೆ ವಾಸ್ತವವಾಗಿ ಖರೀದಿಸಿಲ್ಲ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


