nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರ.ಸಂ.4ಕ್ಕೆ ಮತ ಹಾಕಿ ಸುಧಾಕರ್ ಲಾಲ್ ನ್ನು ಗೆಲ್ಲಿಸಿ: ಲಾಲ್ ಬಡ ಜನರ ನೋವು ಆಲಿಸ್ತಾರೇ:  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
    ಕೊರಟಗೆರೆ May 5, 2023

    ಕ್ರ.ಸಂ.4ಕ್ಕೆ ಮತ ಹಾಕಿ ಸುಧಾಕರ್ ಲಾಲ್ ನ್ನು ಗೆಲ್ಲಿಸಿ: ಲಾಲ್ ಬಡ ಜನರ ನೋವು ಆಲಿಸ್ತಾರೇ:  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

    By adminMay 5, 2023No Comments2 Mins Read
    sudhakarlal

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ಕೊರಟಗೆರೆ: 2023ಕ್ಕೆ ನೀವು ಸುಧಾರಕಲಾಲ್ ಗೆಲ್ಲಿಸಿ ವಿಧಾನಸೌಧಕ್ಕೆ ಕಳ್ಸಿ.. ನಾನು ಸುಧಾಕರಲಾಲ್ ಮಂತ್ರಿ ಮಾಡಿ ಕೊರಟಗೆರೆಗೆ ಕಳಿಸ್ತೀನಿ.. ಕೊರಟಗೆರೆ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ದಿ ಮಾಡ್ತೀನಿ.. ನಾನು ರೈತನ ಮಗ ನುಡಿದಂತೆ ನಡಿತ್ತೀನಿ-ಕೊಟ್ಟ ಮಾತನ್ನು ಉಳಿಸಿಕೋಳ್ತಿನಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊರಟಗೆರೆ ಕ್ಷೇತ್ರದ ಜನತೆಗೆ ಭರ್ಜರಿ ಭರವಸೆ ನೀಡಿದರು.

    ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಾತ್ಯಾತೀತ ಜನತಾ ದಳದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಸುಧಾಕರಲಾಲ್ ಬಡಜನರು ಕಷ್ಟ-ಸುಖಕ್ಕೆ ಪೋನ್ ಮಾಡಿದ್ರೇ ಬರ್ತಾರೇ. ಲಾಲ್ ಪೋನ್ ನಂಬರ್ ನಿಮ್ಮೇಲ್ಲರ ಹತ್ತಿರ ಇದೆ ಅಲ್ವಾ. ಬಡಜನರು ಕಷ್ಟ ಅಂತಾ ಕರೇದರೇ ತಕ್ಷಣ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ. ಕಾಂಗ್ರೇಸ್ ಮತ್ತು ಬಿಜೆಪಿ ಅಭ್ಯರ್ಥಿ ಬರ್ತಾರಾ ಹೇಳಿ ನೀವೇ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ಪೋನ್ ನಂಬರ್ ಅವರ ಮುಖಂಡರ ಬಳಿಯೇ ಇಲ್ಲ ಎಂದು ತಿಳಿಸಿದರು.

    ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ 25ಕ್ಕೂ ಅಧಿಕ ಚೆಕ್‍ಡ್ಯಾಂ ಕಂ ಬ್ಯಾರೇಜ್‍ನಿಂದ ನೀರಾವರಿ ಅಭಿವೃದ್ದಿ, 950ಕ್ಕೂ ಬಹುರ್‍ಹುಕ್ಕು ಕಮಿಟಿಯಿಂದ 950ಜನ ರೈತರಿಗೆ ಸಾಗುವಳಿ, 35ಸಾವಿರ ಬಡಜನರಿಗೆ ವೈದ್ಯಕೀಯ ಚಿಕಿತ್ಸೆಯೇ ನನ್ನ ಅಭಿವೃದ್ದಿಗೇ ಸಾಕ್ಷಿ. 30ವರ್ಷ ಕೊರಟಗೆರೆ ಕ್ಷೇತ್ರದ ಮನೆಮಗನಾಗಿ ಕೆಲಸ ಮಾಡಿರುವ ನನಗೇ 2023ಕ್ಕೆ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿಕೋಡಿ ಎಂದು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ತುಮಕೂರು ನಗರ ಮಾಜಿ ಶಾಸಕ ಷಫಿ ಅಹಮ್ಮದ್, ಜಿಪಂ ಮಾಜಿ ಸದಸ್ಯ ಶಿವರಾಮಯ್ಯ, ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ಮಹಾಲಿಂಗಪ್ಪ, ಕೊರಟಗೆರೆ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಉಪಾಧ್ಯಕ್ಷ ಮಂಜುನಾಥ, ಮುಖಂಡರಾದ ಪ್ರಕಾಶ್, ರಮೇಶ್, ಲಕ್ಷ್ಮೀನರಸಪ್ಪ, ಅಮರ, ಕಲೀಂವುಲ್ಲ, ಸೈಯದ್‍ಸೈಪುಯಲ್ಲ, ಕರವೇ ನಟರಾಜು, ಪುಟ್ಟನರಸಪ್ಪ ಸೇರಿದಂತೆ ಇತರರು ಇದ್ದರು.

    ಜೆಡಿಎಸ್ ಬೃಹತ್ ಸಮಾವೇಶಕ್ಕೆ ಜನಸಾಗರವೇ ಹರಿದುಬಂಧು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಪರವಾಗಿ ಜೈಕಾರ ಹಾಕಿದರು. ಸಮಾವೇಶಕ್ಕೆ ಮುನ್ನಾ ಕುಮಾರಣ್ಣ ನೋಡಲು ಹೇಲಿಪ್ಯಾಡ್ ಆವರಣದ ಸುತ್ತಮುತ್ತಲು ಸಾವಿರಾರು ಜನ ಅಭಿಮಾನಿಗಳು ದೌಡಾಯಿಸಿದ ಪರಿಣಾಮ ಕಾರ್ಯಕರ್ತರ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಹೇಲಿಕ್ಯಾಪ್ಟರ್ ಇಳಿಯುವ ಮುನ್ನವೇ ಕುಮಾರಣ್ಣ ಪರವಾಗಿ ಜೆಡಿಎಸ್ ಕಾರ್ಯಕರ್ತರು ಜಯಘೋಷ ಮೊಳಗಿಸಿದರು.

    ಲಾಲ್ ಮಂತ್ರಿ ಅಂದಾಕ್ಷಣ ಒಂದು ಕ್ಷಣ ವೇದಿಕೆಯೇ ಸ್ತಬ್ದವಾಗಿ ಜೈಕಾರ ಘೋಷಣೆಯೇ ಕೇಳಿಬಂದದ್ದು ವಿಶೇಷವಾಗಿತ್ತು.

     

    5 ದಿನ ಮಾತ್ರ ನನ್ನ ಜೊತೆಯಾಗಿ ಇರೀ ಸಾಕು. ನಾನು ಮುಂದಿನ 5ವರ್ಷ ನಿಮ್ಮ ಸೇವಕನಾಗಿ ಕೆಲಸ ಮಾಡ್ತೀನಿ.. ನನ್ನ ಅಣ್ಣ ಕುಮಾರಣ್ಣನೇ ನನಗೇ ಶಕ್ತಿ ಮತ್ತು ಅಭಿಮಾನಿ ಬಂಧುಗಳೇ ನನ್ನ ಆಸ್ತಿ.. ಭಗವಂತನಲ್ಲಿ ಪ್ರಾರ್ಥನೆ ಮಾಡ್ತೀನಿ ಕುಮಾರಣ್ಣ ಸಿಎಂ ಆಗ್ಬೇಕು ಅಂತಾ. ನನ್ನ ಕ್ರ.ಸಂ.4ಕ್ಕೆ ಮತ ನೀಡಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ.

    –ಪಿ.ಆರ್.ಸುಧಾಕರ್ ಲಾಲ್, ಮಾಜಿ ಶಾಸಕ, ಕೊರಟಗೆರೆ

     

     

    26ಲಕ್ಷ ರೈತ ಕುಟುಂಬದ 25ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇನೆ. 2ಲಕ್ಷ ಸಾಲಮನ್ನಾ ಯೋಜನೆಯಡಿ 35ಸಾವಿರ ರೈತರ 1800ಕೋಟಿ ಹಣವನ್ನು ಬಿಜೆಪಿ ಸರಕಾರ ಬಿಡುಗಡೆ ಮಾಡಿಲ್ಲ. ನಾನು ಮತ್ತೇ ಮಂತ್ರಿ ಆಗ್ತೀನಿ ಮಾಡ್ತೀನಿ. ಸ್ತ್ರೀಶಕ್ತಿ ಸಂಘದ ಸಂಪೂರ್ಣ ಸಾಲಮನ್ನಾ ಮಾಡಿ ಗ್ರಾಪಂಗೊಂದು ಹೈಟೇಕ್ ಆಸ್ಪತ್ರೆ ಮತ್ತು ಸರಕಾರಿ ಶಾಲೆ ಕಟ್ಟಿಸ್ತೀನಿ.

    –ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.