ತುರುವೇಕೆರೆ: ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಭರ್ಜರಿ ಪ್ರಚಾರ ನಡೆಸಿದ್ದು, ತಾಲೂಕಿನ ಸೂಳೆಕೆರೆ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ,ದೇವರಿಗೆ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಮತಯಾಚನೆ ಪ್ರಾರಂಭಿಸಿದರು.
ಈ ಪ್ರಚಾರದ ಕಾರ್ಯಕ್ರಮದಲ್ಲಿ ಸೂಳೆಕೆರೆ ಗ್ರಾಮದ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದು, ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಎಂ.ಟಿ.ಕೃಷ್ಣಪ್ಪ ಪರ ಮತಯಾಚನೆ ಮಾಡಿದರು.
ಸೂಳೆಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಸಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ನಾಯಕರಿಗೆ ಜೈಕಾರ ಕೂಗುತ್ತಾ, ಮತದಾರರನ್ನು ತಮ್ಮತ್ತ ಸೆಳೆದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy