ಮುಸ್ಲಿಂ ವಿದ್ಯಾರ್ಥಿಯ ಮೇಲೆ ನೈತಿಕ ದಾಳಿ ನಡೆಸಿದ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.
ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ದಾಳಿಯಲ್ಲಿ 18 ವರ್ಷದ ಮುಹಮ್ಮದ್ ಫರೀಶ್ ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಸಹಪಾಠಿ ಹಿಂದೂ ಹುಡುಗಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದಾಗ ವಿದ್ಯಾರ್ಥಿ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಪ್ರಕರಣದಲ್ಲಿ ಒಳಮೊಗ್ರು ಮೂಲದ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುಟುಮನೆ ನಿವಾಸಿ ನಿಶಾಂತ್ ಕುಮಾರ್ (19), ಆರ್ಯಪ್ ನಿವಾಸಿ ಪ್ರಜ್ವಲ್ (23) ಬಂಧಿತರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


