ಬೆಂಗಳೂರು: ಇಂದು SSLC ಫಲಿತಾಂಶ ಪ್ರಕಟವಾಗಲಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.
11 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದಿದೆ.ಇನ್ನು ಫಲಿತಾಂಶವನ್ನು http://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.
ಮಾರ್ಚ್ 31 ರಿಂದ ಏ. 15ರವರೆಗೆ 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಣ ಸಚಿವರ ಬದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy