nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಹೆಬ್ಬಾಳಕರ್ ಅವರಂತಹ ಶಾಸಕರು ಸಿಗುವುದು ಅಪರೂಪ – ಶಾಸಕಿ ಪ್ರಣತಿ ಶಿಂಧೆ
    ರಾಜ್ಯ ಸುದ್ದಿ May 8, 2023

    ಲಕ್ಷ್ಮೀ ಹೆಬ್ಬಾಳಕರ್ ಅವರಂತಹ ಶಾಸಕರು ಸಿಗುವುದು ಅಪರೂಪ – ಶಾಸಕಿ ಪ್ರಣತಿ ಶಿಂಧೆ

    By adminMay 8, 2023No Comments2 Mins Read
    pranathi dande

    ಬೆಳಗಾವಿ: ಆಯ್ಕೆಯಾದ ನಂತರ 5 ವರ್ಷ ಜನರತ್ತ ಮುಖವನ್ನೇ ಹಾಕದ ಜನಪ್ರತಿನಿಧಿಗಳೇ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಂತಹ ನಿರಂತರವಾಗಿ ಜನರ ಜೊತೆ ಇರುವ ಶಾಸಕರು ಸಿಗುವುದು ಅಪರೂಪ ಎಂದು ಸೊಲ್ಲಾಪುರ ಶಾಸಕಿ ಪ್ರಣತಿ ಶಿಂಧೆ ಹೇಳಿದ್ದಾರೆ.

    ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಅವರ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಎಲ್ಲ ಜನಪ್ರತಿನಿಧಿಗಳಿಗೆ ಅವರು ಆದರ್ಶರಾಗುತ್ತಾರೆ.

    ಜೊತೆಗೆ ಅವರು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರುವುದು ಕೂಡ ವಿಶೇಷವಾಗಿದೆ. ಅಂತಹ ಶಾಸಕರನ್ನು ಗ್ರಾಮೀಣ ಕ್ಷೇತ್ರದ ಜನರು ಯಾವುದೇ ಕಾರಣದಿಂದ ಕಳೆದುಕೊಳ್ಳಲು ಇಚ್ಚಿಸುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

    ಕಾಂಗ್ರೆಸ್ ಪಕ್ಷ ಬಡವರ ಪರವಾಗಿರುವ ಪಕ್ಷ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಡವರ ಪರವಾಗಿ ಹಲವಾರು ಗ್ಯಾರಂಟಿಗಳನ್ನು ಘೋಷಿಸಿದೆ. 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಪ್ರತಿ ತಿಂಗಳ 2 ಸಾವಿರ ರೂ., ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಭತ್ಯೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮೊದಲಾದವುಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಈ ಬಾರಿ ಬದಲಾವಣೆಯಾಗಲಿದ್ದು, ನಿಜವಾದ ಪ್ರಗತಿಯನ್ನು ಕಾಣಲಿದ್ದೀರಿ. ಹಾಗಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಪ್ರಣತಿ ಶಿಂಧೆ ಮನವಿ ಮಾಡಿದರು.

    ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ಕಳೆದ 5 ವರ್ಷ ಮಾಡಿರುವ ಕೆಲಸವನ್ನು ನೀವೆಲ್ಲ ಹತ್ತಿರದಿಂದ ನೋಡಿದ್ದೀರಿ. ನಿಮ್ಮ ಮನೆ ಮಗಳಂತೆ ಜವಾಬ್ದಾರಿ ನಿರ್ವಹಿಸಿದ್ದಾರೆ. ನಿಮ್ಮ ಕಷ್ಟ ಕಾಲದಲ್ಲಿ ನಿಮ್ಮೊಂದಿಗೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಹಿಂದೆಂದೂ ಕಾಣದಂತಹ ರೀತಿಯಲ್ಲಿ ಅಭಿವೃದ್ಧಿ ಮಾಡಿದ್ದಾರೆ.

    ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಬ್ಯಾಲೆಟ್ ಯುನಿಟ್ ನಲ್ಲಿ 4ನೇ ನಂಬರ್ ನಲ್ಲಿರುವ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

    ಇದೇ ಸಂದರ್ಭದಲ್ಲಿ, ಮಹಿಳೆಯರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಮೆರವಣಿಗೆ ನಡೆಸಿ ಲಕ್ಷ್ಮೀ ಹೆಬ್ಬಾಳಕರ್ ಪರವಾಗಿ ಮತ ಯಾಚಿಸಿದರು. ಸ್ಥಳೀಯ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು…

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.