ಅಮೆರಿಕದ ಟೆಕ್ಸಾಸ್ ನಲ್ಲಿ ಬಸ್ ನಿಲ್ದಾಣಕ್ಕೆ ಕಾರೊಂದು ಗುದ್ದಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ನಿರಾಶ್ರಿತರು ಮತ್ತು ವಲಸಿಗರಿಗೆ ಆಶ್ರಯ ನೀಡುವ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಸ್ಥಳೀಯ ಕಾಲಮಾನ 08:30 ಕ್ಕೆ ಮೆಕ್ಸಿಕನ್ ಗಡಿಯ ಸಮೀಪವಿರುವ ಬ್ರೌನ್ಸ್‌ವಿಲ್ಲೆ ನಗರದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದವರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಮೃತಪಟ್ಟವರು ವಲಸಿಗರೇ ಎಂಬುದು ಸ್ಪಷ್ಟವಾಗಿಲ್ಲ. ಆರು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಇದು ಉದ್ದೇಶಪೂರ್ವಕ ದಾಳಿ ಎಂದು ಪೊಲೀಸರನ್ನು ಉಲ್ಲೇಖಿಸಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರು ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.ಯುಎಸ್ ಬಾರ್ಡರ್ ಪ್ರೊಟೆಕ್ಷನ್ ಅಧಿಕಾರಿಗಳ ಪ್ರಕಾರ, ಬ್ರೌನ್ಸ್ವಿಲ್ಲೆ ನಗರದಲ್ಲಿ ಅಕ್ರಮ ವಲಸೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


