ಮೈಸೂರು: ವರುಣಾ ರಣಕಣ ಈ ಬಾರಿ ಹೈ ವೋಲ್ಟೇಜ್ನಿಂದ ಕೂಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಸಮುದಾಯದ ನಾಯಕ, ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಅಲ್ಲದೇ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವರುಣಾವನ್ನು ಗೆಲ್ಲಲು ತಂತ್ರ ರೂಪಿಸಿದ್ದಾರೆ.
ಇದರಿಂದ ತೆಲೆ ಕೆಡೆಸಿಕೊಂಡ ಸಿದ್ದರಾಮಯ್ಯ ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಸಿದ್ದರಾಮಯ್ಯ ಮನೆಯಲ್ಲಿ ಉಳಿಯದೇ ಹೋಟೆಲ್‌ನಲ್ಲಿ ಖಾಸಗಿ ಹೋಟೆಲ್‌ನಲ್ಲಿ ಕುಳಿತು ಕ್ಷೇತ್ರದ ಗೆಲುವಿಗೆ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿದ್ದರು ಟಿ ಕೆ ಬಡಾವಣೆ ಮನೆಗೆ ತೆರಳಿಲ್ಲ.
ವರುಣಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರನ್ನು ಹೋಟೆಲ್‌ಗೆ ಕರೆಸಿಕೊಂಡು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ವರುಣ ಕ್ಷೇತ್ರದ ಪ್ರಮುಖ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


