ತುಮಕೂರು: ಪ್ರಪ್ರಥಮವಾಗಿ ಜಿಲ್ಲೆಯ ಮತದಾರರಿಗೆ ಕೃತಜ್ಙತೆ ಹೇಳೋಕೆ ಬಯಸ್ತೇನೆ. ರಾಜ್ಯದ ಜನರು ಸಹ ಕಾಂಗ್ರೆಸನ್ನ ಅತ್ಯದ್ಬುತವಾಗಿ ಗೆಲ್ಲಿಸಿದ್ದಾರೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಕೃತಜ್ಞತೆ ಅಭಿನಂದನೆ ಸಲ್ಲಿಸುತ್ತೇವೆ. ನಾವು ನಿರೀಕ್ಷೆ ಮಾಡಿದಂತೆ ಈ ಬಾರಿ ಸರ್ಕಾರ ಮಾಡ್ತೀವಿ ಅಂತ ಹೇಳಿದ್ವಿ ಎಂದು ಹೇಳಿದರು.
ಇನ್ನುಮುಂದೆ ನಮ್ಮ ವರಿಷ್ಠರು ಏನ್ ಹೇಳ್ತಾರೆ ಅದಕ್ಕೆ ಬದ್ದರಾಗಿರ್ತೇವೆ. ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಒಂದು ವಿಶ್ವಾಸವಿತ್ತು. ಏಳು ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ ಎಂದರು.
ಹೈಕಮಾಂಡ್ ಯಾವ ರೀತಿಯ ಒಂದು ನಿರ್ಧಾರಕ್ಕೆ ಬರಲಿದೆ ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy