ತುರುವೇಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾಸಕ ಎಂ ಟಿ ಕೃಷ್ಣಪ್ಪ ಗೆಲುವಿನ ನಗೆಬೀರಿದ ಹಿನ್ನೆಲೆಯಲ್ಲಿ ಗಗನದ ಎತ್ತರಕ್ಕೆ ಏರಿದ ಬೆಂಬಲಿಗರು ಮತ್ತು ಕಾರ್ಯಕರ್ತರು ಹರ್ಷೋದ್ಘಾರ ಮಾಡಿದರು.
ತುರುವೇಕೆರೆ ಕ್ಷೇತ್ರದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಮ್ ವಿರುದ್ಧ ಜಯಸಾಧಿಸಿದ ಎಂ.ಟಿ.ಕೃಷ್ಣಪ್ಪ, ತುರುವೇಕೆರೆ ಪಟ್ಟಣದಲ್ಲಿ ಕಾರ್ಯಕರ್ತರ ಜಯಭೇರಿ ಬಾರಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಿಂದ ತುರುವೇಕೆರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕುಣಿಯುತ್ತ ಕುಪ್ಪಳಿಸುತ್ತ ಕಾರ್ಯಕರ್ತರು, ಡಿ.ಜೆ. ಶಬ್ದಕ್ಕೆ ಹೆಜ್ಜೆ ಹಾಕುತ್ತಾ ಸಾಗಿದರು. ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಕೃಷ್ಣಪ್ಪನವರ ಬೆಂಬಲಿಗರು ಜಮಾವಣೆಗೊಂಡು ಮೆರವಣಿಗೆ ನಡೆಸಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy