ನಿಖಿಲ್ ಕುಮಾರಸ್ವಾಮಿ ಈ ಬಾರಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ವಿರುದ್ಧ ಅವರು ಸೋಲನುಭವಿಸಿದ್ದಾರೆ.
ಇದೀಗ ಫೇಸ್ಬುಕ್ ಮೂಲಕ ಸಂದೇಶವೊಂದನ್ನು ಪ್ರಕಟಿಸಿದ್ದಾರೆ. ತಮ್ಮ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ತಂದೆ ಕುಮಾರಸ್ವಾಮಿ ಹಾಗೂ ತಾತ ಮಾಜಿ ಪ್ರಧಾನಿ ದೇವೇಗೌಡರಿಂದ ಕಲಿತ ಪಾಠವನ್ನು ಸ್ಮರಿಸಿಕೊಂಡಿದ್ದಾರೆ.
”ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ” ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


