ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆಯಲ್ಲಿ ಸಿದ್ದರಾಮಯ್ಯನವರ ಕೈ ಮೇಲಾಗಿದೆ ಎಂದು ಸೂಚಿಸಲಾಗಿದೆ. ಕೇಂದ್ರ ವೀಕ್ಷಕರು ಸಿದ್ದರಾಮಯ್ಯ ಅವರಿಗೆ ಬಹುತೇಕ ಶಾಸಕರ ಬೆಂಬಲವಿದೆ ಎಂದು ಅಂದಾಜಿಸಿದ್ದಾರೆ. ಇನ್ನು ಹೆಚ್ಚಿನ ಚರ್ಚೆಗಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು. ಇವರಿಬ್ಬರ ಬೆಂಬಲಿಗರು ಸಭೆ ನಡೆದ ಬೆಂಗಳೂರಿನ ಖಾಸಗಿ ಹೋಟೆಲ್ ಮುಂದೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಮಲಿಕಾರ್ಜುನ್ ಖರ್ಗೆ ಮತ್ತು ಸೋನಿಯಾ ಗಾಂಧಿ ಈ ವಿಚಾರವಾಗಿ ಚರ್ಚೆ ನಡೆಸಿದರು.
ಖರ್ಗೆ, ಸೋನಿಯಾ ಅವರಲ್ಲದೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಿತ್ರಪಕ್ಷಗಳು ಸೇರಿದಂತೆ ಪಕ್ಷದ ನಾಯಕರಿಗೂ ಆಹ್ವಾನ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


