ಪಾವಗಡ: 2023ನೇ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಎಪ್ಪತ್ತು ಸಾವಿರ ಮತ ಪಡೆದು ಸೋತ ಹಿನ್ನೆಲೆಯಲ್ಲಿ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎಮ್.ತಿಮ್ಮರಾಯಪ್ಪ, ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ನನಗೆ ಇಷ್ಟರ ಮಟ್ಟಿಗೆ ಮತದಾನ ಮಾಡಿದಂತಹ ಎಲ್ಲಾ ನನ್ನ ತಾಲೂಕಿನ ಮತದಾರರಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತಿದ್ದೇನೆ ಎಂದರು.
ಜನರ ತೀರ್ಪನ್ನು ಸ್ವಾಗತಿಸುತ್ತೇನೆ. ಈ ಬಾರಿ ಕ್ಷೇತ್ರದ ಕಾರ್ಯಕರ್ತರು ನಾಯಕರು ನಮ್ಮ ಪಕ್ಷದ ಪ್ರಣಾಳಿಕೆಯನ್ನು ನಂಬಿ ಶಿಸ್ತಿನ ಸಿಪಾಯಿ ಗಳಂತೆ ಕಾರ್ಯನಿರ್ವಹಿಸಿದ್ದಾರೆ. ಕೆಲವೊಂದು ಸಣ್ಣಪುಟ್ಟ ಅಂತರದಲ್ಲಿ ಸೋತಿರುತ್ತೇವೆ. ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಎದೆಗುಂದದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಯಲ್ಲಿ ಧೈರ್ಯದಿಂದ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸಬೇಕು. ನಿಮ್ಮ ಬೆಂಬಲಕ್ಕೆ ಪಕ್ಷ ಸದಾ ನಿಂತಿರುತ್ತದೆ ತಾಲೂಕಿನ ಜನತೆಯ ಅಭಿವೃದ್ಧಿಗಾಗಿ ಶಾಸಕರು ಮಾಡುವ ಕೆಲಸಕ್ಕೆ ನ್ಯಾಯಯುತವಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy