ಬೆಂಗಳೂರು: ಕೆರೆಯ ಬಳಿ ಆಟ ಆಡುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಗಟ್ಟಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಶಕ್ತಿ (4) ಮೃತ ಬಾಲಕ. ಬಾಲಕನ ಪೋಷಕರು ಮಾಗಡಿ ರಸ್ತೆಯ ಅಗ್ರಹಾರ ಮೂಲದವರಾಗಿದ್ದಾರೆ. ಬಾಲಕ ಪರಪ್ಪನ ಅಗ್ರಹಾರ ಸಮೀಪದ ನಾಗನಾಥಪುರಕ್ಕೆ ತನ್ನ ಅಜ್ಜಿ ಮನೆಗೆಂದು ಬಂದಿದ್ದು, ಕೆರೆ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾನೆ.
ಘಟನೆ ನಡೆದ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದು, ಸುಮಾರು 24 ಗಂಟೆಗಳ ಕಾಲ ಬಾಲಕನಿಗಾಗಿ ಕಾರ್ಯಾಚರಣೆನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡುವ ಸಂದರ್ಭ ಪೋಷಕರು ಅಡ್ಡಿಪಡಿಸಿದ್ದಾರೆ. ಕೊನೆಗೆ ಅವರ ಮನವೊಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


