nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!
    ತುಮಕೂರು May 16, 2023

    ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!

    By adminMay 16, 2023No Comments2 Mins Read
    alemari

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಮದ ಅಲೆಮಾರಿಗಳು ಸರ್ಕಾರಿ ಸವಲತ್ತುಗಳಿಂದ ವಂಚಿತವಾಗಿದ್ದು, ಈ ಬಗ್ಗೆ ತಾಲೂಕು ಆಡಳಿತ ಸಮಾಜ ಇಲಾಖೆ ಕಂಡೂ ಕಾಣದಂತೆ ಕಣ್ಣು ಮುಚ್ಚಿಕುಳಿತಿದೆ.

    ಇಲ್ಲಿ ವಾಸಿಸುತ್ತಿರುವ 25 ಕುಟುಂಬಗಳ ಪೈಕಿ  12ರಿಂದ 15 ಜನಕ್ಕೆ ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಬರುತ್ತಿಲ್ಲ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಮೊದಲಾದ ಅಗತ್ಯ ದಾಖಲೆಗಳನ್ನು ಕೂಡ ನೀಡಲಾಗಿಲ್ಲ. ಕೊರಟಗೆರೆ ತಾಲೂಕು ಆಡಳಿತವು ಅಲೆಮಾರಿ ಸಮುದಾಯಗಳನ್ನು ನಿರ್ಲಕ್ಷ್ಯಿಸಿದ್ದು,  ಅಲೆಮಾರಿ ಸಮುದಾಯಗಳ ಹಿತ ಕಾಯಬೇಕಾಗಿದ್ದ ಸಮಾಜ ಕಲ್ಯಾಣ ಇಲಾಖೆ ನಿದ್ದೆಗೆ ಜಾರಿದೆ.


    Provided by
    Provided by

    ಗ್ರಾಮದಲ್ಲಿ ಅಲೆಮಾರಿಗಳಿಗೆ ಇದುವರೆವಿಗೂ ವೃದ್ದಾಪ್ಯ ವೇತನ, ಅಂಗವಿಕಲ ವೇತನ ಸೌಲಭ್ಯ ಮನೆಗೆ ತಲುಪಿಸಲು ಸಂಬಂಧಪಟ್ಟವರು ಸಂಪೂರ್ಣ ವಿಫಲವಾಗಿದ್ದಾರೆ. ಈ ಹಿಂದಿನ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂ ಜಂರವರು ಈ ಜನರಿರುವ ಸ್ಥಳಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ ಸ್ಥಳದಲ್ಲೇ ಬಹುತೇಕ ಮೂಲ ದಾಖಲೆಗಳಾದ ಆಧಾರ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಮಾಡಿಸಿ ಕೊಟ್ಟಿದ್ದು, ಈ ಮಧ್ಯೆ ತಹಶೀಲ್ದಾರ್ ರವರು ವರ್ಗಾವಣೆಯಾದ ಕಾರಣ ಈ ಸೌಲಭ್ಯಗಳಿಗೆ ತಡೆಯಾಗಿವೆ ಎಂದು ತುಮಕೂರಿನ ಭೂಮಿ ವಸತಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ತಿಳಿಸಿದೆ.

    ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ರವರು ಪದೇ ಪದೇ ಹೇಳಿಸಿಕೊಳ್ಳದೆ, ತುರ್ತಾಗಿ ಈ ಜಾಗಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ, ತುರ್ತಾಗಿ ದಾಖಲೆಗಳನ್ನು ಸಿದ್ಧಪಡಿಸಿ ಪಿಂಚಣಿ ಸೌಲಭ್ಯ ಕಲ್ಪಿಸಿ ಕೊಡಬೇಕಾಗಿದೆ ಎಂದು ಸಮಿತಿ ಹೇಳಿದೆ.

    ತುರ್ತಾಗಿ ಸ್ಥಳಕ್ಕೆ ಕೊರಗೆರೆ ತಹಶೀಲ್ದಾರ್ ಅವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಿಸಿದ ನೌಕರರೊಂದಿಗೆ ಸ್ಥಳಕ್ಕೆ ತೆರಳಿ, ಪಿಂಚಣಿ ಸೇರಿದಂತೆ ಪಡಿತರ ಹಾಗೂ ಚುನಾವಣಾ ಗುರುತಿನ ಚೀಟಿ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗಿ  ಭೂಮಿ ವಸತಿ ಹಾಗೂ ಸಾಮಾಜಿಕ ಹೋರಾಟ ಸಮಿತಿ, ತುಮಕೂರು ಆಗ್ರಹಿಸಿದೆ.

    ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕನ್ನು ನಮ್ಮತುಮಕೂರು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ವೇಳೆ ಪ್ರತಿಕ್ರಿಯಿಸಿದ ಅವರು, ಇದು ರೆವಿನ್ಯೂ ಡಿಪಾರ್ಟ್ ಮೆಂಟ್ ನಿಂದ ಬರೋದು, ನಮ್ಮದು ಸೋಷಿಯಲ್ ವೆಲ್ಫೇರ್ ಡಿಪಾರ್ಟ್ ಮೆಂಟ್ ಎಂದರು. ಅಲೆಮಾರಿಗಳ ಸಮಸ್ಯೆಗಳು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುತ್ತವೆ ಅಲ್ಲವೇ ಎಂದು ಪ್ರಶ್ನಿಸಿದಾಗ, ಇಡೀ ದೇಶಕ್ಕೆ ರಾಜ್ಯಕ್ಕೆ ವೃದ್ಧಾಪ್ಯ ವೇತನ ನೀಡೋದು ರೆವಿನ್ಯು ಡಿಪಾರ್ಟ್ ಮೆಂಟ್, ಅವರು ಸಕಾಲದಲ್ಲಿ ಅರ್ಜಿ ಕೊಟ್ಟು ಡಾಕ್ಯುಮೆಂಟ್ ಕೊಟ್ರೆ, ವಯಸ್ಸಿನ ಆಧಾರದಲ್ಲಿ ವೃದ್ಧಾಪ್ಯ ವೇತನ ಕೊಡ್ತಾರೆ ಎಂದರು.

    ಒಟ್ಟಿನಲ್ಲಿ ಸಾಮಾಜಿಕ ನ್ಯಾಯದಿಂದ ವಂಚಿತವಾಗಿರುವ ಅಲೆಮಾರಿಗಳ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟವರು ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ. ಹಿಂದಿನ ತಹಶೀಲ್ದಾರ್ ನಹೀದಾ ಜಂ ಜಂ ಅವರು ತೋರಿದ ದಿಟ್ಟತನ ಮತ್ತು ಗಟ್ಟಿತನ ಈಗಿನ ತಹಶೀಲ್ದಾರ್ ತೋರುವರೇ? ಎನ್ನುವುದನ್ನು ಕಾದುನೋಡಬೇಕಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.