nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ನಟನೆಯ ಲವ್‌ ಯು ಅಭಿ ಕನ್ನಡ ವೆಬ್‌ ಸಿರೀಸ್‌  ಶೀಘ್ರವೇ ಬಿಡುಗಡೆ
    ಸ್ಪೆಷಲ್ ನ್ಯೂಸ್ May 17, 2023

    ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ನಟನೆಯ ಲವ್‌ ಯು ಅಭಿ ಕನ್ನಡ ವೆಬ್‌ ಸಿರೀಸ್‌  ಶೀಘ್ರವೇ ಬಿಡುಗಡೆ

    By adminMay 17, 2023No Comments2 Mins Read
    love you abhi

    ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್‌ ಯು ಅಭಿ’ ಎಂಬ ಕನ್ನಡ ವೆಬ್‌ ಸಿರೀಸ್‌ ಮೇ 19ರಂದು ‘JioCinema’ದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ!

    ಕಾಳಿ ವೇಲಾಯುಧಂ ನಿರ್ಮಾಣ ಮಾಡಿ ನಿರ್ದೇಶಿಸಿರುವ ‘JIOCINEMA’ ಒರಿಜಿನಲ್‌ ವೆಬ್‌ ಸಿರೀಸ್‌ನಲ್ಲಿ ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ಮತ್ತು ರವಿಶಂಕರ್‍‌ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.


    Provided by
    Provided by
    Provided by

    ಹಿರಿಯ ನಟ ರವಿಚಂದ್ರನ್‌ ಅವರ ಪುತ್ರ ವಿಕ್ರಮ್‌ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್‌ ಸಿರೀಸ್‌. ತಮ್ಮ ಪಾತ್ರದ ಕುರಿತು ತುಂಬ ಉತ್ಸಾಹದಿಂದ ವಿವರಿಸುತ್ತಾರೆ ವಿಕ್ರಮ್. ‘ಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ. ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ ನ್ಯಾಯೋಚಿತವೇ’ ಎಂಬ ಮಾತಿದೆ. ಆದರೆ ಶಿವ ಮತ್ತು ಅವನ ಬದುಕಿನ ವಿಷಯಕ್ಕೆ ಬಂದಾಗ, ಅವನ ಪ್ರೇಮದಲ್ಲಿಯೂ, ಬದುಕಿನಲ್ಲಿ ಹೋರಾಟದಲ್ಲಿಯೂ ನ್ಯಾಯೋಚಿತವಾಗಿದ್ದು ನಡೆಯುವುದೇ ಇಲ್ಲ’. ಎಂದು ತಮ್ಮ ಪಾತ್ರದ ಕುರಿತು ವಿವರಿಸುತ್ತಾರೆ ಶಿವನ ಪಾತ್ರಕ್ಕೆ ಜೀವ ತುಂಬಿದ ವಿಕ್ರಮ್ ರವಿಚಂದ್ರನ್.

    ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅದಿತಿ ಪ್ರಭುದೇವ ‘ಲವ್‌ ಯು ಅಭಿ’ಯ ಮೂಲಕ ವೆಬ್‌ ಸಿರೀಸ್‌ ಜಗತ್ತಿಗೂ ಜಿಗಿದಿದ್ದಾರೆ. ಇವರಿಬ್ಬರ ಕ್ಯೂಟ್‌ ಕಾಂಬಿನೇಷನ್‌ ಜೊತೆ ಖ್ಯಾತ ನಟ ರವಿಶಂಕರ್‍‌ ಅವರ ಅಬ್ಬರದ ಭರ್ಜರಿ ಮಸಾಲೆಯೂ ಇದೆ. ಪೊಲೀಸ್‌ ಅಧಿಕಾರಿಯಾಗಿ ರವಿಶಂಕರ್‍‌  ಅಬ್ಬರಿಸಿದ್ದಾರೆ.

    ಪ್ರೇಮ, ವಿರಹ, ಕೊಲೆ, ತನಿಖೆ ಹೀಗೆ ನೋಡುಗರನ್ನು ಕುರ್ಚಿಯ ತುದಿಯಲ್ಲಿ ಕೂಡುವಂತೆ ಮಾಡಬಲ್ಲ ಎಲ್ಲ ಅಂಶಗಳೂ ಇದರಲ್ಲಿದೆ. ಒಂದು ಸಾವಿನ ಸುತ್ತ ಬೆಳೆಯುತ್ತ ಹೋಗುವ ಈ ಕಥನದಲ್ಲಿ ಮನಸ್ಸನ್ನು ಭಾವುಕಗೊಳಿಸುವ ಸನ್ನಿವೇಶಗಳಿವೆ, ದಾಂಪತ್ಯದ ಮಧುರ ಕ್ಷಣಗಳನ್ನು ಉಣಬಡಿಸುವ ದೃಶ್ಯಗಳಿವೆ, ಪ್ರೇಮದ ವ್ಯಾಮೋಹ ಮತ್ತು ಸತ್ಯದ ಹಂಬಲದ ನಡುವಿನ ಘರ್ಷಣೆಯೂ ಇದೆ. ಅನುಮಾನ, ವಂಚನೆ, ಮುಗ್ಧ ಪ್ರೇಮ, ಒಳ್ಳೆಯತನ, ಸ್ವಾರ್ಥ, ಪ್ರಾಮಾಣಿಕತೆ ಎಲ್ಲ ಗುಣಗಳೂ ಸೇರಿ ರೂಪುಗೊಂಡ ಅಪರೂಪದ ರಸಪಾಕ ‘ಲವ್‌ ಯು ಅಭಿ’. ಮೂವತ್ತು ನಿಮಿಷಗಳ ಏಳು ಎಪಿಸೋಡ್‌ಗಳಲ್ಲಿ ಅಭಿಯ ಬದುಕಿನ ಕಥೆಯನ್ನು ಹೇಳಲಾಗಿದೆ.

    ಯುವನಟರ ಧಮಾಲ್; ಅನುಭವಿಗಳ ಕಮಾಲ್:

    ಕನ್ನಡ ದೃಶ್ಯಮಾಧ್ಯಮ ಲೋಕಕ್ಕೆ ಹೊಸ ಫ್ಲೇವರ್ ಪರಿಚಯಿಸಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್‍‌ ಕಥೆಯಲ್ಲಿ ಹೊಸ ಉತ್ಸಾಹದ ನಟರ ಜೊತೆಗೆ ವಿನಯಾ ಪ್ರಸಾದ್, ರಚಿತಾ ಮಹಾಲಕ್ಷ್ಮಿ, ಅಶೋಕ್ ಶರ್ಮ, ಶ್ರೀನಾಥ್, ಅಂಬಿಕಾ, ಶ್ರೀನಿವಾಸ ಮೂರ್ತಿ, ಸುಂದರ್‍‌ರಾಜ್‌ ಹೀಗೆ ಅನುಭವಿ ಕಲಾವಿದರ ದಂಡೂ ಇದೆ.

    ‘ಲವ್‌ ಯು ಅಭಿ’ಗೆ ಅರುಣ್ ಬ್ರಹ್ಮ ಅವರ ಕ್ಯಾಮೆರಾ ಚಳಕವಿದ್ದು, ಪ್ರದಿಪ್‌ ರಾಘವ್ ಸಂಕಲನ ಮಾಡಿದ್ದಾರೆ. ನಿಜಿಲ್‌ ದಿನಕರ್‍‌ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ನಿರ್ವಹಿಸಿದ್ದಾರೆ. ಅಭಿಲಾಷ್‌ ಗೌಡ ಮತ್ತು ಜಿ.ವಿ. ಸತೀಶ್‌ ಕುಮಾರ್ ಜಂಟಿಯಾಗಿ ಮಾತುಗಳನ್ನು ಪೋಣಿಸಿದ್ದಾರೆ.

     

    ಟ್ರೈಲರ್‍‌ ಲಿಂಕ್:

     

    admin
    • Website

    Related Posts

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.