ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲಾಗಿದ್ದು,
ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ ರನ್ನು ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ನ ಕೊಲಿಜಿಯಂ ವಿರುದ್ಧ ಸಾಲು ಸಾಲಾಗಿ ಟೀಕೆ ಮಾಡುತ್ತಿದ್ದ ಕಾನೂನು ಸಚಿವ ಕಿರಣ್ ರಿಜಿಜು ಅವರ ಖಾತೆಯನ್ನು ಬದಲಿಸಲಾಗಿದೆ. ಅವರಿಗೀಗ ಭೂ ವಿಜ್ಞಾನ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘ ವಾಲ್ ಅವರಿಗೆ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವರಾಗಿ ಬಡ್ತಿ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


