ಚಂಡೀಗಢ: ಹರ್ಯಾಣದ ಅಂಬಾಲದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಹಾಗೂ ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ಗುರುವಾರ ಇಲ್ಲಿನ ಪಿಜಿಐ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
72 ವರ್ಷ ವಯಸ್ಸಿನ ಕಟಾರಿಯಾ ಅವರು, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿದ್ದ ಕಟಾರಿಯಾ ಅವರು ಎರಡು ವರ್ಷಗಳ ಕಾಲ ಸೇವೆಯ ಬಳಿಕ 2021ರ ಜುಲೈನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇವರ ನಿಧನಕ್ಕೆ ಸಿಎಂ ಮನೋಹರ್ ಲಾಲ್ ಸಂತಾಪ ಸೂಚಿಸಿದ್ದು, ಕೇಂದ್ರದ ಮಾಜಿ ರಾಜ್ಯ ಸಚಿವ ಮತ್ತು ಅಂಬಾಲಾದ ಸಂಸದ ರತನ್ ಲಾಲ್ ಕಟಾರಿಯಾ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರು ಸಮಾಜದ ಕಲ್ಯಾಣ ಮತ್ತು ಹರಿಯಾಣದ ಜನರ ಪ್ರಗತಿಗಾಗಿ ಸಂಸತ್ತಿನಲ್ಲಿ ಯಾವಾಗಲೂ ಧ್ವನಿ ಎತ್ತಿದವರು. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


