ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಗೆಲುವಿನ ಉತ್ಸಾಹದಲ್ಲಿದ್ದ ಪ್ರದೀಪ್ ಈಶ್ವರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕಾಂಗ್ರೆಸ್ನ ನೂತನ ಶಾಸಕ ಪ್ರದೀಶ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ.
72 ವರ್ಷ ವಯಸ್ಸಿನ ರತ್ನಮ್ಮ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇನ್ನು ಮತ್ತೊಂದೆಡೆ ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ. ಸದ್ಯ ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


