ಬಿಜೆಪಿ ನಾಯಕನ ಮಗಳ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಉತ್ತರಾಖಂಡದ ಪೌರಿ ಗರ್ವಾಲ್ ಮುನ್ಸಿಪಲ್ ಅಧ್ಯಕ್ಷ ಮತ್ತು ಮಾಜಿ ಶಾಸಕ ಯಶಪಾಲ್ ಬೇನಮ್ ಅವರ ಮಗಳ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಯಶಪಾಲ್ ಬೇನಮ್ ಅವರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಾಳೆ.
ಕಾರ್ಡ್‌ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಕ್ಷದ ನಾಯಕನ ಮಗಳು ಮುಸ್ಲಿಂ ಯುವಕನೊಂದಿಗೆ ವಿವಾಹವಾಗುತ್ತಿರುವುದನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಇದೇ ವೇಳೆ ಕೆಲವು ಹಿಂದುತ್ವವಾದಿಗಳು ಬಿಜೆಪಿಯ ದ್ವಂದ್ವ ನೀತಿಗಾಗಿ ಟ್ರೋಲ್ ಮಾಡುತ್ತಿದ್ದರೆ ಇನ್ನು ಕೆಲವರು ಮದುವೆಯನ್ನು ಲವ್ ಜಿಹಾದ್ ಎಂದು ಟೀಕಿಸುತ್ತಿದ್ದಾರೆ. ಕೆಲವರು ಈ ಘಟನೆಯನ್ನು ಇತ್ತೀಚೆಗೆ ಬಿಡುಗಡೆಯಾದ ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿಗೆ ಹೋಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


