ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ.
ಕರ್ನಾಟಕದ ಜನರಿಗೆ ನನ್ನ ಮನಃಪೂರ್ವಕವಾಗಿ ಅಭಿನಂದನೆಗಳು. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕೆ ಅಭಿನಂದನೆಗಳು. ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ.
ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್ ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


