ತುಮಕೂರು: ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ರೆಡ್ಡಿಹಳ್ಳಿ ನಡೆದಿದೆ.
ಆಹಾರ ಅರಸಿ ನಾಡಿಗೆ ಬಂದಿದ್ದ ಕರಡಿನ್ನು ಹತ್ಯೆ ಮಾಡಲಾಗಿದೆ ಅನ್ನೋ ಅನುಮಾನಗಳು ಸೃಷ್ಟಿಯಾಗಿದೆ. ಕರಡಿ ಸತ್ತು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಆಹಾರ ಅರಸಿ ಊರಿನ ಹೊರವಲಯಕ್ಕೆ ಬಂದಾಗ ಕರಡಿಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂಬ ಅನುಮಾನ ವ್ಯಾಪಕವಾಗಿ ಕೇಳಿ ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy