ಜಪಾನಿನ ಹಿರೋಷಿಮಾ ನಗರದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದರು. ಯುದ್ಧವನ್ನು ಪರಿಹರಿಸಲು ಭಾರತವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಮೋದಿ ಝೆಲೆನ್ಸ್ಕಿಗೆ ಭರವಸೆ ನೀಡಿದರು. ರಷ್ಯಾ ಆಕ್ರಮಣದ ನಂತರ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವಿನ ಮೊದಲ ಮುಖಾಮುಖಿ ಭೇಟಿ ಇದಾಗಿದೆ.
ರಷ್ಯಾ-ಉಕ್ರೇನ್ ಯುದ್ಧವು ವಿಶ್ವದ ಪ್ರಮುಖ ಸಮಸ್ಯೆಯಾಗಿದೆ. ಇದು ಕೇವಲ ಆರ್ಥಿಕ ಮತ್ತು ರಾಜಕೀಯದ ಸಮಸ್ಯೆಯಲ್ಲ. ಇದು ಮಾನವನ ಸಮಸ್ಯೆ. “ಭಾರತ ಮತ್ತು ನಾನು ಯುದ್ಧವನ್ನು ಕೊನೆಗೊಳಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ” ಎಂದು ಝೆಲೆನ್ಸ್ಕಿಯೊಂದಿಗಿನ ಭೇಟಿಯ ಸಂದರ್ಭದಲ್ಲಿ ಮೋದಿ ಹೇಳಿದರು.
ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಜಿ7 ಗುಂಪಿನ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಶುಕ್ರವಾರ ಹಿರೋಷಿಮಾಗೆ ಆಗಮಿಸಿದರು. ಜಿ-7 ಗುಂಪಿನ ಪ್ರಸ್ತುತ ಅಧ್ಯಕ್ಷ ಜಪಾನ್‌ನ ಆಹ್ವಾನದ ಮೇರೆಗೆ ಉಕ್ರೇನ್ ಅಧ್ಯಕ್ಷರೂ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇದಾದ ನಂತರ ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೂ ಭೇಟಿ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


