ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.
ಇನ್ನೂ ನಾಳೆಯಿಂದ ಸಾರ್ವಜನಿಕರಿಂದ ಗೌರವ–ಸನ್ಮಾನದ ರೂಪದಲ್ಲಿ ಹಾರ–ತುರಾಯಿ, ಶಾಲು–ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ–ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ–ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ—ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ತಿಳಿಸಿದ್ದಾರೆ.


