ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು ನಿನ್ನೆಯ ಮಹಾಮಳೆಗೆ ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ.
ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಲೋಕೇಶ್(31) ಮೃತದೇಹ ಇಂದು(ಮೇ 22) ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ. ಸದ್ಯಕ್ಕೆ ಲೋಕೇಶ್ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


