ಬಿಜೆಪಿಯ ಕೈಯಿಂದ ಕರ್ನಾಟಕದ ಆಡಳಿತವನ್ನು ಮರಳಿ ಪಡೆದ ನಂತರ ಸಿದ್ದರಾಮಯ್ಯ ಸರ್ಕಾರ ಎಲ್ಲಾ ಐದು ಚುನಾವಣಾ ಭರವಸೆಗಳನ್ನು ಈಡೇರಿಸುವುದಾಗಿ ಘೋಷಿಸಿದ್ದು ದೊಡ್ಡ ಸುದ್ದಿಯಾಗಿತ್ತು.
ಇದಾದ ಬಳಿಕ ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ನೀಡಿರುವ ಮತ್ತೊಂದು ಸಲಹೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
ಸಿದ್ದರಾಮಯ್ಯ ಅವರಿಗೆ ಜನರು ಗೌರವ ಸೂಚಕವಾಗಿ ಹೂವು, ಚಿನ್ನ ನೀಡಬಾರದು ಎಂದು ಹೇಳುತ್ತಾರೆ. ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಹೆಚ್ಚು ಖುಷಿಯಾಗುತ್ತದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಹೇಳಿದ್ದಾರೆ.
ಸಮಾರಂಭಗಳಲ್ಲಿ ಪಾಲ್ಗೊಳ್ಳುವಾಗ ಚಿನ್ನ ಅಥವಾ ಹೂವುಗಳನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ವೈಯಕ್ತಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಾನು ಇದನ್ನು ಅನುಸರಿಸುತ್ತೇನೆ. ಉಡುಗೊರೆಗಳ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಬಯಸುವವರು ಪುಸ್ತಕಗಳನ್ನು ನೀಡಿ ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


