ತಮಿಳುನಾಡಿನ ತಂಜಾವೂರಿನಲ್ಲಿ ಬಾರ್‌ನಿಂದ ಮದ್ಯ ಖರೀದಿಸಿದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕೀರ್ ಅಲಂಗಂ ಪಡವೆಟ್ಟಿಯಮ್ಮನ್ ಕೋವಿಲ್ ಸ್ಟ್ರೀಟ್‌ನ ಕುಪ್ಪುಸ್ವಾಮಿ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಮದ್ಯದಂಗಡಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಸರ್ಕಾರಿ ಮದ್ಯದಂಗಡಿ ಮತ್ತು ಬಾರ್‌ನ ನೌಕರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇವರಿಬ್ಬರೂ ನೆನ್ನೆ ಬೆಳಗ್ಗೆ 10:30ಕ್ಕೆ ಸರ್ಕಾರ ನಿಗದಿಪಡಿಸಿದ ಕಾಲಮಿತಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ ಬಾರ್‌ನಿಂದ ಮದ್ಯ ಖರೀದಿಸಿದ್ದಾರೆ. ಬಾರ್ ನಲ್ಲಿ ಮದ್ಯ ಸೇವಿಸಿದ ಕುಪಸ್ವಾಮಿ ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮಾರ್ಕೆಟ್ ಏರಿಯಾದಲ್ಲಿ ವಿವೇಕ್ ಪಾನಮತ್ತನಾಗಿದ್ದ. ತರುವಾಯ, ದೈಹಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿವೇಕ್ ಅವರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಮಧ್ಯಾಹ್ನ ನಿಧನರಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


