ಮಂಗಳೂರು: ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


