ಬೆಂಗಳೂರು: ಮೇ 28 ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲು ನಿರ್ಧರಿಸಿದ್ದಾರೆ.
ಗುರುವಾರ ಜೆಡಿಎಸ್ ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ.
ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


